ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು: ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪು ನೀಡಿದ್ದು, ಅನೂರ್ಜಿತ ವಿವಾಹದಿಂದ ಜನಿಸಿದ ಮಕ್ಕಳು ಕೂಡ ಪೋಷಕರ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹರು ಎಂದು ​ ಹೇಳಿದೆ.

ಹಿಂದು ಕಾನೂನಿನಲ್ಲಿ ಅನೂರ್ಜಿತ ಸಂಬಂಧದಿಂದ ಜನಿಸಿದ ಮಕ್ಕಳು ಹೆತ್ತವರ ಆಸ್ತಿಯನ್ನು ಪಡೆಯಲು ಅರ್ಹರೇ ಎಂಬ ವಿಷಯಕ್ಕೆ ಸಂಬಂಧಿಸಿದಂತೆ 2011ರ ಅರ್ಜಿಯ ಮೇಲಿನ ವಿಚಾರಣೆಯನ್ನು ​ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್, ರದ್ದುಗೊಳಿಸಲಾದ ಅಥವಾ ರದ್ದುಗೊಳಿಸಬಹುದಾದ ವಿವಾಹ ಸಂಬಂಧದಲ್ಲಿ ಜನಿಸಿದ ಮಕ್ಕಳಿಗೆ ಮಾತ್ರ ​ ತಮ್ಮ ಪಾಲಕರ ಆಸ್ತಿ ಮೇಲೆ ಹಕ್ಕಿದೆ ಎಂದು ಕಾಯ್ದೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಕಾನೂನು ಸಮ್ಮತ ವಿವಾಹದಲ್ಲಿ ಜನಿಸಿದ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಪಡೆಯಲು ಹಕ್ಕಿದೆಯೇ ಅಥವಾ ಹಿಂದು ವಿವಾಹ ಕಾಯ್ದೆ ಸೆಕ್ಷನ್ 16(3)ರಲ್ಲಿ ತಮ್ಮ ಪೋಷಕರ ಸ್ವಯಾರ್ಜಿತ ಆಸ್ತಿ ಮೇಲಷ್ಟೇ ಹಕ್ಕಿದೆಯೇ ಎಂದು ಪ್ರಶ್ನಿಸಲಾಗಿತ್ತು.
ಈ ವೇಳೆ ಮಾನ್ಯವಾದ ಅಥವಾ ಅಮಾನ್ಯವಾದ ಯಾವುದೇ ವಿವಾಹದ ನಂತರ ಜನಿಸಿದ ಮಗು ಮಾತ್ರ ತನ್ನ ಹೆತ್ತವರ ಆಸ್ತಿ ಮೇಲೆ ಹಕ್ಕು ಇರುತ್ತದೆ, ಬೇರೆ ಯಾರಿಗೂ ಇಲ್ಲ ಎಂಬುದು ನಿಬಂಧನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!