Saturday, October 11, 2025

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳು ಸಾವು: CBI ತನಿಖೆಗೆ ನೀಡಲು ಸುಪ್ರೀಂ ನಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ವಕೀಲ ವಿಶಾಲ್ ತಿವಾರಿ ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ ತಿರಸ್ಕರಿಸಿದೆ.

ವಿಷಕಾರಿ ದ್ರಾವಣವಾದ ಡೈಎಥಿಲಿನ್‌ ಗ್ಲೈಕಾಲ್‌ (ಡಿಇಜಿ) ಮತ್ತು ಎಥಿಲಿನ್‌ ಗ್ಲೈಕಾಲ್‌ (ಇಜಿ) ಇರುವ ಸಿರಪ್‌ ಸೇವಿಸಿದ 20 ಮಕ್ಕಳು ಮೂತ್ರಪಿಂಡ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೆಲ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಘಟನೆ ಕುರಿತು ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್‌ರಿಫ್‌ ಕೆಮ್ಮಿನ ಸಿರಪ್‌ ತಯಾರಿಸುವ ಶ್ರೇಸನ್‌ ಫಾರ್ಮಾಸ್ಯುಟಿಕಲ್‌ ಕಾರ್ಖಾನೆ ಮಾಲೀಕನನ್ನು ಈಗಾಗಲೇ ಬಂಧಿಸಲಾಗಿದೆ.

error: Content is protected !!