ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಭೀಕರ ಹೊಡೆದಾಟ ನಡೆದು ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಡಿಸೆಂಬರ್ 3ರ ಮಂಗಳವಾರ ಬೆಳಗ್ಗೆ ದೆಹಲಿಯ ಚಿನ್ಮಯ ವಿದ್ಯಾಲಯದಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದಿದ್ದು, ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಬಳಿಕ ಶಿಕ್ಷಕರು ಮಧ್ಯೆ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ.
ಆದರೆ ಅದಾಗಲೇ ಇಬ್ಬರಿಗೂ ಸ್ವಲ್ಪ ಪೆಟ್ಟು ಬಿದ್ದಿದ್ದು, ಓರ್ವ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ಅದಾಗಲೇ ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಾಲಕನ ಬಾಯಿಂದ ನೊರೆ ಬಂದಿದ್ದು, ಬಾಲಕನಿಗೆ ಸೆಳವು ಸಂಬಂಧಿತ ಸಮಸ್ಯೆಯಿಂದ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಶಂಕಿಸಿದ್ದಾರೆ.