ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಮಕ್ಕಳು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ಉಸಿರಾಟಕ್ಕೆ ಸಂಬಂಧಿಸಿದ ಸೋಂಕು ಅಡೆನೋವೈರಸ್ ಹೆಚ್ಚಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಏಳು ಮಕ್ಕಳು ಮೃತಪಟ್ಟಿದ್ದಾರೆ.
ಈ ಋತುವಿನಲ್ಲಿ ಇನ್‌ಫ್ಲುಯೆಂಝಾ ತರಹದ ಕಾಯಿಲೆಗಳು ಹೆಚ್ಚಿದ್ದು, ಪ್ರಾಣ ಕಳೆದುಕೊಂಡ ಮಕ್ಕಳಿಗೆ ಬೇರೆ ಬೇರೆ ಸಮಸ್ಯೆಗೂ ಇತ್ತು ಎನ್ನಲಾಗಿದೆ. ಕಳೆದ 24 ಗಂಟೆಯಲ್ಲಿ ಕೊಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಐದು ಮಕ್ಕಳು ಹಾಗೂ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಕ್ಕಳು ಬೇರೆ ಬೇರೆ ಸಮಸ್ಯೆಯಿಂದಲೂ ಮೃತಪಟ್ಟಿದ್ದಾರೆ, ಅಡೆನೋವೈರಸ್‌ನಿಂದ ಸಾವು ಸಂಭವಿಸಿದೆಯೋ ಅಥವಾ ಇಲ್ಲವೋ ಎನ್ನುವುದಕ್ಕೆ ಇನ್ನೂ ಸಮಯ ಬೇಕಿದೆ ಎಂದು ವೈದ್ಯಕೀಯ ಸಿಬ್ಬಂದಿ ಹೇಳಿದ್ದಾರೆ.