ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸು 6 ಇರಬೇಕು: ಎಲ್ಲ ರಾಜ್ಯಗಳಿಗೆ ಕೇಂದ್ರ ಸೂಚನೆ

 ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರ ಸರ್ಕಾರವು ಶಾಲೆಗಳಲ್ಲಿ ಒಂದನೇ ತರಗತಿಯ ಪ್ರವೇಶಾತಿಯ (Class 1 Admission Age) ಕನಿಷ್ಠ ವಯಸ್ಸನ್ನು 6 ಕ್ಕೆ ಏರಿಕೆ ಮಾಡಿ ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನ್ವಯ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸು 6 ಇರಬೇಕು ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ನಿರ್ದೇಶನ ನೀಡಿದೆ.

14 ರಾಜ್ಯಗಳಲ್ಲಿ 6 ವರ್ಷ ತುಂಬುವ ಮೊದಲೇ ಒಂದನೇ ತರಗತಿಗೆ ಪ್ರವೇಶಾತಿ ನೀಡಲಾಗುತ್ತದೆ. ಆದರೆ, ನೂತನ ಶಿಕ್ಷಣ ನೀತಿ ಅನ್ವಯ ಒಂದನೇ ತರಗತಿಯ ಪ್ರವೇಶಾತಿಗೆ ಯಾವುದೇ ಮಗುವಿಗೆ 6 ವರ್ಷವಾಗಿರಬೇಕು. ಹಾಗಾಗಿ, ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕನಿಷ್ಠ ವಯಸ್ಸನ್ನು 6 ಕ್ಕೆ ಏರಿಸಬೇಕು ಎಂದು ಸೂಚಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!