ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್‌ನ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಮಕ್ಕಳು ಏಕಾಏಕಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
30ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿದ್ದು, ವಾಂತಿ ಬೇಧಿಯಿಂದ ನಿತ್ರಾಣರಾಗಿದ್ದಾರೆ. ತಕ್ಷಣವೇ ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿ, ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾತ್ರಿ ವೇಳೆಗೆ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದ್ದು, ಎಲ್ಲರನ್ನೂ ಡಿಸ್ಚಾರ್ಜ್ ಮಾಡಲಾಗಿದೆ. ಬಿಸಿಯೂಟದಲ್ಲಿ ಯಾವುದಾದರೂ ಕೀಟ ಬಿದ್ದಿತ್ತಾ ಅಥವಾ ಹಾಳಾಗಿರುವ ಪದಾರ್ಥವನ್ನು ಬಳಸಲಾಗಿತ್ತಾ ಎನ್ನುವ ವಿಚಾರಣೆ ನಡೆಯುತ್ತಿದೆ.