ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹದಿಹರೆಯದ ಮಕ್ಕಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಉಂಟಾಗುತ್ತಿರುವ ಅಡ್ಡಪರಿಣಾಮಗಳಿಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.
ಈ ಬಾರಿಯ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕ್ರಾಂತಿಕಾರಿ ನಿರ್ಧಾರವನ್ನು ಘೋಷಿಸಲಾಗಿದೆ.
ಕೇವಲ ಘೋಷಣೆಯಷ್ಟೇ ಅಲ್ಲದೆ, ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸರ್ಕಾರ ‘ವಯಸ್ಸಿನ ದೃಢೀಕರಣ’ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ. ತಂತ್ರಜ್ಞಾನದ ಸುಳಿಗೆ ಸಿಲುಕಿ ಹಾದಿ ತಪ್ಪುತ್ತಿರುವ ಮಕ್ಕಳನ್ನು ರಕ್ಷಿಸಿ, ಅವರಲ್ಲಿ ಸೃಜನಶೀಲತೆ ಮತ್ತು ದೈಹಿಕ ಚಟುವಟಿಕೆಗಳನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.



