Saturday, August 13, 2022

Latest Posts

ಮಕ್ಕಳಲ್ಲಿ ಕೊರೋನಾ ಸೋಂಕು: ವಿಶೇಷ ಕಾಳಜಿವಹಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಬಹುತೇಕ ಮಕ್ಕಳಲ್ಲಿ ಕೊರೋನಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಹುತೇಕ ಮಕ್ಕಳಲ್ಲಿ ಕೊರೊನಾ ಸೋಂಕು ಸೌಮ್ಯ ಅಥವಾ ಕಡಿಮೆ ಲಕ್ಷಣದ್ದಾಗಿರುತ್ತದೆ. ಕೊರೊನಾ ಸೋಂಕಿಗೆ ಒಳಗಾಗಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಜಾಗ್ರತೆ, ಕಾಳಜಿ ವಹಿಸುವುದು ಅತ್ಯವಶ್ಯಕ. ಮಕ್ಕಳನ್ನು ಕೊರೊನಾ ಸೋಂಕಿನಿಂದ ರಕ್ಷಿಸೋಣ. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ ಎಂದರು.

ಮಕ್ಕಳಲ್ಲಿನ ಕೊರೋನಾ ಸೋಂಕು ನಿರ್ವಹಣೆ ಬಗ್ಗೆ ವೈದ್ಯಕೀಯ ಸಲಹೆಗಳನ್ನು ನೀಡಿದ್ದಾರೆ.

  • ಕಡಿಮೆ ಲಕ್ಚಣಗಳಿದ್ದರೆ ಮನೆಯಲ್ಲಿಯೇ ಆರೈಕೆ ಮಾಡಬೇಕು ಎಂದು ತಿಳಿಸಿದ್ದು, ಜ್ವರ ಕಾಣಿಸಿಕೊಂಡರೆ ಪ್ಯಾರಸಿಟಮೋಲ್ 1-15ಎಂಜಿ ಡೋಸ್ ನೀಡಬೇಕು.
  • ಕೆಮ್ಮು, ಗಂಟಲ ಕೆರೆತ, ಗಂಟಲ ನೋವು ಕಾಣಿಸಿಕೊಂಡರೆ ಬಿಸಿ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು.
  • ಈ ವೇಳೆ ದ್ರವ ಪದಾರ್ಥಗಳು ಹಾಗೂ ಪೌಷ್ಠಿಕ ಆಹಾರಗಳನ್ನು ಸೇವಿಸಬೇಕು.Image

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss