ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳ ಫೇವರೆಟ್ ಜೆಮ್ಸ್, ಜೆಲ್ಲಿ ಚಾಕೋಲೆಟ್‌ಗಳಲ್ಲಿ ಆರ್ಟಿಫಿಶಿಯಲ್ ಕಲರ್‌ಗಳು ಸೇರುತ್ತಿದ್ದು, ಇದರ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ.
ಚಾಕೊಲೇಟ್, ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ಗಳಲ್ಲಿ ಹಾನಿಕಾರಕ ರಾಸಾಯನಿಕ ಬಳಕೆ ಆರೋಪ ಕೇಳಿಬಂದಿದೆ. ಇವುಗಳ ಸೇವನೆಯಿಂದ ಕ್ಯಾನ್ಸರ್ ಸಹಿತ ಅಪಾಯಕಾರಿ ಕಾಯಿಲೆಗಳಿಗೆ ದಾರಿ ಮಾಡಿಕೊಡುವುದಲ್ಲದೇ, ಮಕ್ಕಳ ಆರೋಗ್ಯಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಎಫ್ಎಸ್ಎಸ್ಎಐ ಸೂಚನೆ ಬೆನ್ನಲೆ ರಾಜ್ಯದಲ್ಲಿ ಆಹಾರ ಇಲಾಖೆ ಅಲರ್ಟ್ ಆಗಿದ್ದು, ಸ್ಯಾಂಪಲ್ಸ್ ಪಡೆದು ಆಹಾರ ಇಲಾಖೆಯ ಲ್ಯಾಬ್ಗಳಲ್ಲಿ ಟೆಸ್ಟ್ಗೆ ಒಳಪಡಿಸಲು ಮುಂದಾಗಿದೆ.
ಪೆಪ್ಪರಮೆಂಟ್, ಜೇಮ್ಸ್ ಮತ್ತು ಜೆಲ್ಲಿಸ್ಗಳಲ್ಲಿ ಕೃತಕ ಕಲರ್ ಬಳಕೆ ಮಾಡುತ್ತಿದ್ದು, ತಯಾರಿಕಾ ಘಟಕಗಳಲ್ಲಿ ಸ್ವಚ್ಛತೆ ಇರಲ್ಲ ಎನ್ನಲಾಗುತ್ತಿದೆ. ಚಾಕೊಲೇಟ್ಗಳ ತಯಾರಿಕೆಯಲ್ಲಿ ಕೆಲವು ರಾಸಾಯನಿಕಗಳ ಬಳಕೆ ಬಗ್ಗೆ ಕೂಡ ದೂರುಗಳು ಬಂದಿವೆ. ಹೀಗಾಗಿ ಆಹಾರ ಇಲಾಖೆ ರಾಜ್ಯದಲ್ಲಿ ಸ್ಯಾಂಪಲ್ಸ್ ಪಡೆಯಲು ಮುಂದಾಗಿದೆ. ಅಷ್ಟೇ ಅಲ್ಲದೆ ವಿದೇಶದಿಂದ ಆಮದು ಆಗುವ ಪದಾರ್ಥಗಳನ್ನು ಟೆಸ್ಟ್ ಮಾಡಲು ಮುಂದಾಗಿದ್ದು, ಅಸುರಕ್ಷಿತ ಪದಾರ್ಥಗಳ ಮೇಲೂ ಕ್ರಮಕ್ಕೆ ಆಹಾರ ಇಲಾಖೆ ಪ್ಲಾನ್ ಮಾಡಿದೆ.
ನಿಮ್ಮ ಮಕ್ಕಳಿಗೆ ಈ ಪದಾರ್ಥಗಳನ್ನು ನೀಡಬೇಡಿ, ಆದಷ್ಟು ಮನೆಯಲ್ಲಿಯೇ ಎಲ್ಲ ಪದಾರ್ಥಗಳನ್ನು ಮಾಡಿಕೊಡಿ. ಜಂಕ್‌ನಿಂದಾಗಿ ಮಕ್ಕಳ ಆರೋಗ್ಯ ಹಾಳಾಗುತ್ತಿದೆ. ಬಣ್ಣ ಬಣ್ಣದ ಚಾಕೋಲೆಟ್‌ಗಳು, ಚಿಪ್ಸ್ ಹಾಗೂ ಇನ್ನಿತರ ಕೆಟ್ಟ ಆಹಾರದಿಂದ ದೂರ ಇರಿ.