Wednesday, December 6, 2023

Latest Posts

ರಾಜಕೀಯ ಆಡಳಿತದಲ್ಲಿ ಮಕ್ಕಳ ಹಸ್ತಕ್ಷೇಪ ಸರಿಯಲ್ಲ: ಅಭಿಷೇಕ್ ಅಂಬರೀಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಾನು ಯಾವ್ದೇ ಕಾರಣಕ್ಕೂ ರಾಜಕೀಯಕ್ಕೆ ಬರಲ್ಲ ಎಂದು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ (Abishek Ambareesh) ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು (Hubballi) ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿನಿಮಾ ರಂಗ ಬೇರೆ, ರಾಜಕಾರಣ ಬೇರೆ. ಅಂಬರೀಶಣ್ಣ (Ambareesh) 34 ವರ್ಷ ಚಿತ್ರರಂಗದಲ್ಲಿದ್ದು ನಂತರ ರಾಜಕೀಯಕ್ಕೆ ಬಂದರು ಎಂದು ಹೇಳಿದ್ದಾರೆ.

ನಮ್ಮ ತಾಯಿಯವರು ತಾವು ಇರೋವರೆಗೆ ರಾಜಕೀಯಕ್ಕೆ ಬರಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ನಾನು ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲ್ಲ. ಸೇವೆ ಮಾಡುವಂತಹ ಕೆಲಸಗಳಿದ್ದರೆ, ಮಾತ್ರ ಭಾಗವಹಿಸುತ್ತೇನೆ. ರಾಜಕೀಯ ಆಡಳಿತದಲ್ಲಿ ಮಕ್ಕಳ ಹಸ್ತಕ್ಷೇಪ ಸರಿಯಲ್ಲ ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!