Saturday, March 25, 2023

Latest Posts

ಮಾ.17ರಿಂದ ಮಕ್ಕಳ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ

ಹೊಸದಿಗಂತ ವರದಿ ಕೊಪ್ಪಳ:

ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾ.17ರಿಂದ 19ರವರೆಗೆ ಸಾಹಿತ್ಯ ಭವನದಲ್ಲಿ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ 11ನೇ ಸಮ್ಮೇಳನ ಏರ್ಪಡಿಸಿದೆ.

ನಗರದ ಮೀಡಿಯಾ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ನ ಅಧ್ಯಕ್ಷ ರಮೇಶ ಸುರ್ವೆ, ಸಮ್ಮೇಳನಕ್ಕೆ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್ ಕುಮಾರ್ ಎಸ್. ಹೊಸಮನಿ ಆಯ್ಕೆಯಾಗಿದ್ದಾರೆ. ಮಾ.17 ರಂದು 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಗವಿಮಠದ ಶ್ರೀಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ವಿರಕ್ತಮಠದ ಗುರುಬಸವ ಸ್ವಾಮೀಜಿ ಹಾಗೂ ಹಿರೇಮಠದ ಡಾ.ಕಲ್ಮೇಶ್ವರ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!