VIRAL | ಓದಿನಲ್ಲಿ ಮಕ್ಕಳ ಕಳಪೆ ಪ್ರದರ್ಶನ: ಬೇಸರದಲ್ಲಿ ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಕ್ಕಳು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದುಕೊಂಡರೆ ಅಥವಾ ಕೊಟ್ಟ ಟಾಸ್ಕ್‌ ಮಾಡದಿದ್ದರೆ ಅವರಿಗೆ ಬೈಯುವುದು, ಹೊಡೆಯುವುದು ಇನ್ನಿತರ ಶಿಕ್ಷೆ ನೀಡುವ ಕೆಲಸ ಶಿಕ್ಷಕರದ್ದಾಗಿದೆ. ಆದರೆ ಈ ಶಾಲೆಯ ಶಿಕ್ಷಕರು ಮಕ್ಕಳ ಪೂರ್‌ ಪರ್ಫಾಮೆನ್ಸ್‌ನಿಂದ ಮನನೊಂದು ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡಿದ್ದಾರೆ.

ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಮಕ್ಕಳು ಓದಿನಲ್ಲಿ ಕಳಪೆ ಪ್ರದರ್ಶಿಸಿದ್ದರು. ಹೀಗಾಗಿ ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳಿಗೆ ಶಿಕ್ಷೆ ಕೊಡದೆ ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡಿದ್ದಾರೆ. 50 ಸಿಟ್​ಅಪ್ಸ್​ ಮಾಡಿದ್ದಾರೆ. ಈ ಘಟನೆಯ 2.3 ನಿಮಿಷಗಳ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ದೊಡ್ಡ ಚರ್ಚೆಯನ್ನೇ ಹುಟ್ಟುಹಾಕಿದೆ.

ನಾನು ನಿಮ್ಮನ್ನು ಬೈಯ್ಯುತ್ತಿಲ್ಲ, ನಮ್ಮ ಕೈಗಳನ್ನು ಕಟ್ಟಿಹಾಕಿಕೊಂಡಿದ್ದೇವೆ, ನಾವು ಎಷ್ಟೆಲ್ಲಾ ಪ್ರಯತ್ನ ಮಾಡಿದರೂ ನಡವಳಿಕೆ, ಶಿಕ್ಷಣಿಕ, ಬರವಣಿಗೆ ಅಥವಾ ಓದಿನಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಶಿಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!