ಹೊಸದಿಗಂತ ವರದಿ ಮಡಿಕೇರಿ:
ನಗರದ ಅರಣ್ಯ ಭವನ ಸಮೀಪ ಶಿಶುವಿನ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ 15 ದಿನಗಳ ಹಿಂದೆ ಜನಿಸಿರುವ ಮಗುವಿನ ಶವ ಇದಾಗಿದ್ದು, ಮೂರು ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ವೃತ್ತ ನಿರೀಕ್ಷಕ ಪಿ.ಕೆ. ರಾಜು, ಠಾಣಾಧಿಕಾರಿ ಅನ್ನಪೂರ್ಣ, ಅಪರಾಧ ವಿಭಾಗದ ಸಿಬ್ಬಂದಿಗಳು, ಶಿಶು ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿ ಅರಣ್ಯ ಭವನದ ಬಳಿ ಮಗುವಿನ ಮೃತದೇಹ ಪತ್ತೆ

