ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಲಿ ದೇಶದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಭಾರತಕ್ಕೆ ಆಗಮಿಸಲಿದ್ದಾರೆ. ಐದು ದಿನಗಳ ಪ್ರವಾಸ ವೇಳೆ ಅವರು ತಮ್ಮ ಪತ್ನಿ ಹಾಗೂ ನಿಯೋಗದೊಂದಿಗೆ ಆಗ್ರಾದಲ್ಲಿರುವ ವಿಶ್ವಪ್ರಸಿದ್ಧ ಪ್ರೇಮಸೌಧ ತಾಜ್ ಮಹಲ್‌ಗೆ ಇಂದು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವಾಸಿಗರಿಗೆ ಎರಡು ಗಂಟೆಗಳ ಕಾಲ ತಾಜ್ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ತಾಜ್ ಮಹಲ್ ವೀಕ್ಷಣೆಗೆ ಸಾಮಾನ್ಯ ಪ್ರವಾಸಿಗರ ಪ್ರವೇಶವನ್ನು ಎರಡು ಗಂಟೆಗಳ ಕಾಲ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುವುದು. ಮಧ್ಯಾಹ್ನ 2:45ರ ಸುಮಾರಿಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಆಗ್ರಾದ ಖೇರಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಗೇಬ್ರಿಯಲ್ ಮತ್ತವರ ನಿಯೋಗವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅನುಪಸ್ಥಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಬರಮಾಡಿಕೊಳ್ಳಲಿದ್ದಾರೆ.