ಎದುರಿಗೆ ಬರುತ್ತಿದ್ದ ಮಹಿಳೆ ಕಂಡು ಸಿಂಹದ ರಿಯಾಕ್ಷನ್‌ ನೋಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಇತ್ತೀಚಿನ ದಿನಗಳಲ್ಲಿ ಕಾಡಿನಲ್ಲಿ ಇರಬೇಕಾದ ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ಬರುತ್ತಿವೆ. ಆಹಾರ ಅರಸುತ್ತಾ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿರುವ ಪ್ರಸಂಗಗಳು ಹೆಚ್ಚಾಗುತ್ತಿವೆ. ಈಗ ವೈರಲ್‌ ಆಗಿರುವ ಈ ವಿಡಿಯೋದಲ್ಲಿ ದಾರಿ ತಪ್ಪಿ ಸಿಂಹವೊಂದು ನಗರಕ್ಕೆ ಬಂದಿದೆ, ಅದೇ ಸಮಯದಲ್ಲಿ ಮಹಿಳೆಯೊಬ್ಬಳು ಜಾಗಿಂಗ್ ಮಾಡುವುದನ್ನು ಕಂಡು ಸಿಂಹ ಹೆದರಿ ಪೊದೆಯಲ್ಲಿ ಅಡಗಿ ಕುಳಿತಿರುವ ದೃಶ್ಯವನ್ನ ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಡಿಯೋವನ್ನು ಐಎಫ್‌ಎಸ್ ಅಧಿಕಾರಿ ಸುಶಾಂತ ನಂದಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಲವು ರೀತಿಯ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!