ರಾಷ್ಟ್ರ ರಾಜಧಾನಿಯಲ್ಲಿ ಚಳಿ ಚಳಿ: ಜ.15ರವರೆಗೆ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರ ರಾಜಧಾನಿಯಲ್ಲಿ ಚಳಿಯ ಪ್ರಮಾಣ ಅಧಿಕವಾಗಿದ್ದು, ಇಂದು ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.

ಇಂದು ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ಚಳಿಯಿಂದ ತತ್ತರಿಸಿ ಹೋಗಿದ್ದು ಯಾರು ಮನೆಯಿಂದ ಹೊರಬರುತ್ತಿಲ್ಲ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು.

ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಚಳಿ ಹೆಚ್ಚಾಗುತ್ತಲೆ ಇದ್ದು ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!