Sunday, December 10, 2023

Latest Posts

ಚೀನಾದಲ್ಲಿ ಪ್ರಬಲ ಭೂಕಂಪನ, ಸೂರು ಕಳೆದುಕೊಂಡ 14,427 ಮಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೈಋತ್ಯ ಚೀನಾದ ಸಿಚುವಾನ್‌ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ದುರಂತದಲ್ಲಿ ನಾಲ್ವರು ಸಾವನ್ನಪಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂದು ಗುರುವಾರ ನಗರದ ಭೂಕಂಪ ಪರಿಹಾರ ಕೇಂದ್ರ ಕಚೇರಿ ತಿಳಿಸಿದೆ.ಇದೀಗ ಭೂಕಂಪದಿಂದ ಒಟ್ಟು 14,427 ಜನರು ಬಾಧಿತರಾಗಿದ್ದಾರೆ ಎಂದು ಪ್ರಾಥಮಿಕ ಅಂಕಿಅಂಶಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸ್ಥಳೀಯ ತುರ್ತು ರಕ್ಷಣಾ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡಲು ಮತ್ತು ಸಹಾಯ ಮಾಡಲು ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸ್ಥಳೀಯ ಅಗ್ನಿಶಾಮಕ ದಳ, ತುರ್ತು ರಕ್ಷಣಾ, ಸಶಸ್ತ್ರ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮತ್ತು ಸಾರ್ವಜನಿಕ ಭದ್ರತಾ ಕಚೇರಿ ಸೇರಿದಂತೆ 800ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಭೂಕಂಪ ಪೀಡಿತ ಪ್ರದೇಶಗಳಿಗೆ ಕಳುಹಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 4,500ಕ್ಕಿಂತ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಭೂಕಂಪದಿಂದ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಇದೀಗ ಸುಮಾರು 14,427 ಮಂದಿ ನಿರಾಶ್ರತಿರಾಗಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!