ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಹುನಾನ್ ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಧ್ಯ ಚೀನಾದ ಹುನಾನ್ ಪ್ರಾಂತ್ಯದ ಕ್ಸುಚಾಂಗ್-ಗುವಾಂಗ್‌ಝೌ ಹೆದ್ದಾರಿಯಲ್ಲಿ 44 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಘೋರ ದುರಂತ ಸಂಭವಿಸಿದೆ.
ಡಿಕ್ಕಿ ಹೊಡೆದ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿದ್ದು, ಈ ಅಪಘಾತದಲ್ಲಿ 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 66 ಮಂದಿ ಗಾಯಗೊಂಡಿದ್ದು, ಅವರಲ್ಲಿ ಎಂಟು ಮಂದಿ ಸ್ಥಿತಿ ಗಂಭೀರವಾಗಿದೆ. ಅಪಘಾತ ಸಂಭವಿಸಿದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಈ ಘಟನೆಯ ಬಗ್ಗೆ ಚೀನಾ ಸರ್ಕಾರ ವಿಶೇಷ ಗಮನ ಹರಿಸಿದೆ. ಅಪಘಾತ ಹೇಗೆ ಸಂಭವಿಸಿತು ಎಂದು ಸರ್ಕಾರ ತನಿಖೆ ನಡೆಸುತ್ತಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸ್ಥಳೀಯವಾಗಿ ವೈರಲ್ ಆಗುತ್ತಿವೆ.
Within 10 minutes, five vehicle collision accidents have occurred on an #expressway in #Hunan province on Saturday. The accidents have left 16 #dead and another 66 injured, according to local #traffic police#China #湖南 #中国 pic.twitter.com/BxQvXqRGJA
— Qingfeng coming again and again (@AndQingfeng) February 5, 2023