ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಗಡಿಗೆ ಹೊಂದಿಕೊಂಡಿರುವ ಲಡಾಖ್‌ನಲ್ಲಿ ಚೀನಾ ಮತ್ತೆ ತನ್ನ ತಗಾದೆ ತೆಗೆದಿದೆ. ಲಡಾಖ್‌ನ ಅಕ್ಸಾಯ್ ಚಿನ್‌ನಲ್ಲಿ ಅಕ್ರಮವಾಗಿ ಚೀನಾ 2 ಕೌಂಟಿಗಳನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿರುವುದರಿಂದ ಇದನ್ನು ಭಾರತ ತೀವ್ರವಾಗಿ ಖಂಡಿಸಿದೆ.
“ಈ ಪ್ರದೇಶದಲ್ಲಿ ಚೀನಾದ ಅಕ್ರಮ ಆಕ್ರಮಣವನ್ನು ನಾವು ಎಂದಿಗೂ ಸಹಿಸುವುದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಚೀನಾದ ಹೋಟಾನ್ ಪ್ರಿಫೆಕ್ಚರ್‌ನಲ್ಲಿ ಎರಡು ಹೊಸ ಕೌಂಟಿಗಳನ್ನು ರಚಿಸುವ ಬಗ್ಗೆ ಹೇಳಿದೆ.
ಈ ಬಗ್ಗೆ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಚೀನಾದ ಹೋಟಾನ್ ಪ್ರಿಫೆಕ್ಚರ್‌ನಲ್ಲಿ ಎರಡು ಹೊಸ ಕೌಂಟಿಗಳ ಸ್ಥಾಪನೆಗೆ ಸಂಬಂಧಿಸಿದ ಪ್ರಕಟಣೆಯನ್ನು ನಾವು ನೋಡಿದ್ದೇವೆ. ಈ ಕೌಂಟಿಗಳ ಅಧಿಕಾರ ವ್ಯಾಪ್ತಿಯ ಭಾಗಗಳು ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿವೆ” ಎಂದು ಹೇಳಿದ್ದಾರೆ.