ಚೀನಾ ಮತ್ತೆ ಕ್ಯಾತೆ: ಅರುಣಾಚಲ ಪ್ರದೇಶದ 30 ಸ್ಥಳಗಳ ಹೆಸರು ಬದಲಾಯಿಸಲು ಪ್ಲಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅರುಣಾಚಲ ಪ್ರದೇಶದ ಬಗ್ಗೆ ಚೀನಾ ಮತ್ತೆ ಮತ್ತೆ ಹೇಳಿಕೆ ನೀಡುತ್ತಿದೆ. ‘ಡ್ರಾಗನ್’ ಅರುಣಾಚಲ ಪ್ರದೇಶದ ಹಲವು ಸ್ಥಳಗಳ ಹೆಸರನ್ನು ಪೇಪರ್ ನಲ್ಲಿ ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆ.

ಅರುಣಾಚಲ ಪ್ರದೇಶದ 30 ಸ್ಥಳಗಳ ಹೆಸರನ್ನು ಬದಲಾಯಿಸುವ ಕುರಿತು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಚೀನಾ ಅರುಣಾಚಲ ಪ್ರದೇಶವನ್ನು ಜಂಗ್ನಾನ್ ಎಂದು ಕರೆಯುತ್ತದೆ ಮತ್ತು ಅದನ್ನು ಟಿಬೆಟಿಯನ್ ಸ್ವಾಯತ್ತ ಪ್ರದೇಶದ ಭಾಗವೆಂದು ಪರಿಗಣಿಸುತ್ತದೆ.

ಕಳೆದ 7 ವರ್ಷಗಳಲ್ಲಿ ಇದು ನಾಲ್ಕನೇ ಬಾರಿ ಅರುಣಾಚಲದ ಸ್ಥಳಗಳ ಹೆಸರನ್ನು ಚೀನಾ ಬದಲಾಯಿಸಿದೆ ಎಂಬುದು ಗಮನಾರ್ಹ. ಏಪ್ರಿಲ್ 2023 ರಲ್ಲಿ ಚೀನಾ ತನ್ನ ನಕ್ಷೆಯಲ್ಲಿ ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರನ್ನು ಬದಲಾಯಿಸಿತ್ತು. ಇದಕ್ಕೂ ಮುನ್ನ ಚೀನಾ 2021ರಲ್ಲಿ 15 ಹಾಗೂ 2017ರಲ್ಲಿ 6 ಸ್ಥಳಗಳ ಹೆಸರನ್ನು ಬದಲಾಯಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!