ಭಾರತದ ಒಂದಿಂಚು ಭೂಮಿಯನ್ನೂ ಚೀನಾ ಆಕ್ರಮಿಸಲು ಸಾಧ್ಯವಿಲ್ಲ: ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿಮೋದಿ ಸರ್ಕಾರದ ಅಡಿಯಲ್ಲಿ ಒಂದು ಇಂಚು ಭೂಮಿಯನ್ನು ಆಕ್ರಮಿಸಲು ಚೀನಾಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಸಂದೇಶ ನೀಡಿದ್ದಾರೆ.

ಅಸ್ಸಾಂನ ಲಖಿಂಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಾ, ಗಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದು, ಭಾರತದ ಒಂದಿಂಚು ಭೂಮಿಯನ್ನೂ ಚೀನಾ ಅತಿಕ್ರಮಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಬಾಂಗ್ಲಾದೇಶದೊಂದಿಗಿನ ದೇಶದ ಗಡಿಯನ್ನು ಭದ್ರಪಡಿಸಿದೆ ಮತ್ತು ಒಳನುಸುಳುವಿಕೆಯನ್ನು ನಿಲ್ಲಿಸಿದೆ ಎಂದು ಹೇಳಿದರು.

1962 ರ ಚೀನಾದ ಆಕ್ರಮಣದ ಸಮಯದಲ್ಲಿ, ಅಂದಿನ ಪ್ರಧಾನಿ ಜವಹರ್ ಲಾಲ್ ನೆಹರೂ ಅವರು ಅಸ್ಸಾಂ ಮತ್ತು ಅರುಣಾಚಲ ಪ್ರದೇಶಕ್ಕೆ ‘ಬೈ-ಬೈ’ ಹೇಳಿದ್ದರು. ಈ ರಾಜ್ಯಗಳ ಜನರು ಅದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲಆದರೆ ಈಗ, ಚೀನಾ ನಮ್ಮ ಒಂದು ಇಂಚು ಭೂಮಿಯನ್ನು ಅತಿಕ್ರಮಿಸಲು ಸಾಧ್ಯವಾಗಲಿಲ್ಲ. ಡೋಕ್ಲಾಮ್‌ನಲ್ಲಿಯೂ ನಾವು ಅವರನ್ನು ಹಿಂದಕ್ಕೆ ಅಟ್ಟಿದ್ದೇವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮತ್ತು ಅಸ್ಸಾಂ ರಾಜ್ಯದಲ್ಲಿ ಹಿಮಂತ ಬಿಸ್ವಾ ಶರ್ಮಾ ಸರ್ಕಾರ, ಒಳನುಸುಳುವಿಕೆಯನ್ನು ಪರಿಣಾಮಕಾರಿಯಾಗಿ ನಿಲ್ಲಿಸಿದೆ. ಅಸ್ಸಾಂನ ಹಿಂದಿನ ಕಾಂಗ್ರೆಸ್ ಸರ್ಕಾರವು ರಾಜ್ಯಕ್ಕೆ ತನ್ನ ದುರ್ಬಲ ಆಡಳಿತದ ಮೂಲಕ ರಾಜ್ಯದ ಜನೆತೆಗೆ “ಅನ್ಯಾಯ” ವನ್ನು ಮಾಡಿದೆ ಮತ್ತು ವಿಭಿನ್ನ ಹಿಂಸಾತ್ಮಕ ಚಳುವಳಿಗಳು ಮತ್ತು ದಂಗೆ-ಸಂಬಂಧಿತ ಘಟನೆಗಳಿಂದ ಕೊಲ್ಲಲ್ಪಟ್ಟ ಹಲವಾರು ಜನರಿಗೆ ಅನ್ಯಾಯವಾಗಿದೆ ಆರೋಪಿಸಿದರು.

ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದ ಅಡಿಯಲ್ಲಿ ಶಾಂತಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಸುಮಾರು 9,000 ಬಂಡುಕೋರರು ಶರಣಾಗಿದ್ದಾರೆ. ರಾಜ್ಯದ ಶೇ 80 ರಷ್ಟು ಪ್ರದೇಶಗಳಿಂದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು ಹಿಂಪಡೆಯಲಾಗಿದೆ. ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈಗ ಮತದಾರರ ಮುಂದೆ ಆಯ್ಕೆಗಳು ಸ್ಪಷ್ಟವಾಗಿದ್ದು, ರಾಹುಲ್ ಗಾಂಧಿ ಮತ್ತು ಇಂಡಿಯಾ ಒಕ್ಕೂಟವನ್ನು ತಿರಸ್ಕರಿಸಿ ಕೇಂದ್ರದಲ್ಲಿ ಮೂರನೇ ಅವಧಿಗೆ ಸರ್ಕಾರವನ್ನು ಖಚಿತಪಡಿಸುವುದು ಎಂದು ಅಮಿತ್ ಶಾ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!