Sunday, December 3, 2023

Latest Posts

ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅರುಣಾಚಲ ಪ್ರದೇಶದ ಮೂವರು ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಚೀನಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದ (China) ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games) ಕ್ರೀಡಾಕೂಟಕ್ಕೆಅರುಣಾಚಲ ಪ್ರದೇಶದ ಮೂವರು ವೂಶೂ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದೆ.

10 ಆಟಗಾರರನ್ನೊಳಗೊಂಡ ತಂಡದಲ್ಲಿ ಮೂವರು ಮಹಿಳಾ ಆಟಗಾರರಿಗೆ ಪ್ರವೇಶ ನಿರಾಕರಿಸಿದ್ದು, ಉಳಿವರು ಹ್ಯಾಂಗ್‌ಜೂಗೆ ತೆರಳಿದ್ದಾರೆ. ವೂಶೂ ಕ್ರೀಡಾಪಟುಗಳಾದ ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಅವರ ಪ್ರವೇಶ ನಿರಾಕರಿಸಿದೆ.

ಹ್ಯಾಂಗ್‌ಜೂ ಏಷ್ಯನ್ ಗೇಮ್ಸ್ ಆರ್ಗನೈಸಿಂಗ್ ಕಮಿಟಿಯಿಂದ ಭಾರತದ ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಾಮ್ಗು ಪ್ರವೇಶ ವೀಸಾವಾಗಿ ಮಾನ್ಯತೆ ಕಾರ್ಡ್ಗಳನ್ನು ಪಡೆದಿದ್ದರು. ಈ ಮಾನ್ಯತಾ ಪತ್ರವನ್ನು ಪ್ರವೇಶ ವೀಸಾ ಎಂದು ಪರಿಗಣಿಸಲಾಗುತ್ತದೆ. ಅಥ್ಲೀಟ್‌ಗಳು ತಮ್ಮ ಪ್ರಯಾಣ ದಾಖಲೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕಿತ್ತು. ಏಕೆಂದರೆ ಇದು ಆಟಗಾರರು ಆಗಮಿಸುವ ವೇಳೆ ದೃಢೀಕರಿಸಲಾಗುತ್ತದೆ. ಆದ್ರೆ ಬುಧವಾರ ಏಷ್ಯನ್ ಗೇಮ್ಸ್‌ಗೆ ತೆರಳಬೇಕಿದ್ದಾಗ ಅರುಣಾಚಲ ಪ್ರದೇಶದ ಮೂವರು ಆಟಗಾರರು ತಮ್ಮ ಪ್ರಯಾಣದ ದಾಖಲೆಗಳನ್ನ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಮೂವರಿಗೆ ಪ್ರವೇಶ ನಿಷೇಧ ಮಾಡಲಾಗಿದೆ ಎಂದು ತಿಳಿದುಬಂದಿದೆ. 10 ಆಟಗಾರರನ್ನೊಳಗೊಂಡ ತಂಡದಲ್ಲಿ ಉಳಿದ ಯಾವುದೇ ಆಟಗಾರರು ಮತ್ತು ಸಿಬ್ಬಂದಿಗೆ ಈ ಸಮಸ್ಯೆ ಎದುರಾಗಿಲ್ಲ. ಏಷ್ಯನ್ ಗೇಮ್ಸ್ಗೆ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಲಾಗಿದೆ ಎನ್ನುವ ಬಗ್ಗೆ ಭಾರತ ಸರ್ಕಾರದ ಅಧಿಕಾರಿ ಅರಿಂದಮ್ ಬಾಗ್ಚಿ ಪ್ರತಿಕ್ರಿಯಿಸಿದ್ದಾರೆ.

ಚೀನಾದ ಹಾಂಗ್‌ಜೂನಲ್ಲಿ ನಡೆಯುತ್ತಿರಯುವ 19ನೇ ಏಷ್ಯನ್ ಗೇಮ್ಸ್‌ಗೆ ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ ಎಂದು ಭಾರತ ಸರ್ಕಾರ ತಿಳಿದುಕೊಂಡಿದೆ. ವಾಸಸ್ಥಳ, ಜನಾಂಗೀಯತೆಯ ಆಧಾರದ ಮೇಲೆ ನಾಗರಿಕರನ್ನು ಭೇದ-ಭಾವದಿಂದ ನೋಡುವುದನ್ನ ದೃಢವಾಗಿ ತಿರಸ್ಕರಿಸುತ್ತದೆ. ಈ ಕುರಿತುದೆಹಲಿ ಮತ್ತು ಬೀಜಿಂಗ್‌ನಲ್ಲೂ ಪ್ರತಿಭಟನೆ ದಾಖಲಿಸಲಾಗಿದೆ.

ಚೀನಾ ನಮ್ಮ ಕ್ರೀಡಾಪಟುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿದೆ. ಚೀನಾದ ಈ ನಡೆ ಏಷ್ಯನ್ ಗೇಮ್ಸ್ನ ಉತ್ಸಾಹ ಹಾಗೂ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ಭಾರತ ಅಸಮಾಧಾನ ಹೊರಹಾಕಿದೆ.

ಅನುರಾಗ್ ಠಾಕೂರ್ ಪ್ರವಾಸ ರದ್ದು
ಇತ್ತ ಚೀನಾ ಅರುಣಾಚಲ ಪ್ರದೇಶದ (Arunachal Pradesh) ಕ್ರೀಡಾಪಟುಗಳಿಗೆ ಪ್ರವೇಶ ನಿರಾಕರಿಸಿದ ಬೆನ್ನಲ್ಲೇ ಮಾಹಿತಿ ಮತ್ತು ಪ್ರಸಾರ ಹಾಗೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ನಿಗದಿತ ಚೀನಾ ಪ್ರವಾಸವನ್ನ ರದ್ದುಗೊಳಿಸಿದ್ದಾರೆ. ಇದು ಪ್ರತಿಭಟನೆಯ ಸಂಕೇತವೆಂದೂ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.ಜೊತೆಗೆ ನಮ್ಮ ಹಿತಾಸಕ್ತಿಯನ್ನ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವು ಹಕ್ಕನ್ನು ಭಾರತ ಸರ್ಕಾರ ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚೀನಾ, ಎಲ್ಲಾ ದೇಶಗಳ ಕ್ರೀಡಾಪಟುಗಳು ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಏಷ್ಯನ್ ಗೇಮ್ಸ್ನಲ್ಲಿ ಭಾಗವಹಿಸುವಂತೆ ಕೋರುವುದಾಗಿ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!