ಕೋವಿಡ್ ಹೆಸರಿನಲ್ಲಿ ಮನೆಗೆ ಬೀಗ: ಬೆಂಕಿ ಅವಘಡದಲ್ಲಿ ಕುಟುಂಬದ 10ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚೀನಾ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದು, ಒಂದು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಕೋವಿಡ್ ಸೋಂಕಿಗೆ ಒಳಗಾಗಿದ್ದರೆ, ಆ ಪ್ರದೇಶ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳನ್ನು ಲಾಕ್‌ ಮಾಡಲಾಗುತ್ತಿದೆ. ಮನೆಗಳಿಗೆ ಬೀಗ ಹಾಕಿ ಮತ್ತೊಂದು ವಿವಾದಕ್ಕೆ ಚೀನಾ ಸರ್ಕಾರ ಒಳಗಾಗಿದೆ.

ಕೋವಿಡ್ ನಿಯಮಗಳ ಹೆಸರಿನಲ್ಲಿ ಅಧಿಕಾರಿಗಳು ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗೆ ಬೀಗ ಹಾಕಿದ್ದಾರೆ. ಈ ವೇಳೆ ಆ ಮನೆಯಲ್ಲಿ ಬೆಂಕಿ ಅವಘಡ ಉಂಟಾಗಿದ್ದು, ಮನೆಯಲ್ಲಿದ್ದವರೆಲ್ಲಾ ಪ್ರಾಣ ಕಳೆದುಕೊಂಡಿದ್ದಾರೆ. ಮನೆಗೆ ಬೀಗ ಹಾಕಿದ್ದರಿಂದ ಒಳಗಿದ್ದ ಕುಟುಂಬಸ್ಥರು ತಪ್ಪಿಸಿಕೊಳ್ಳಲು ಸಾಧ್ಯವಾಗದೆ, ಕುಟುಂಬಸ್ಥರೆಲ್ಲಾ ಪ್ರಾಣ ಕಳೆದುಕೊಂಡಿದ್ದಾರೆ. ಚೀನಾದ ಉರುಮ್ಕಿ ನಗರದ ಉಯಿಘರ್ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ 5-13 ವರ್ಷದ ನಾಲ್ವರು ಮಕ್ಕಳಿದ್ದಾರೆ. ಈ ಘಟನೆಯಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸರ್ಕಾರದ ಕಟ್ಟುನಿಟ್ಟಿನ ನಿರ್ಬಂಧದಿಂದ ಈ ಅವಘಡ ಸಂಭವಿಸಿದೆ ಎಂದು ಜನರು ಟೀಕಿಸುತ್ತಿದ್ದಾರೆ.

ಈ ಘಟನೆಯ ವಿರುದ್ಧ ಜನರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೋವಿಡ್ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದರೂ ಕೂಡ ಅಧಿಕಾರಿಗಳು ಈ ವಿಚಾರದಲ್ಲಿ ತಲೆಕೆಡಿಸಿಕೊಳ್ಳುತ್ತಿಲ್ಲ. ರಸ್ತೆ ತಡೆ ಮಾಡಿದ್ದರಿಂದ ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ ಎಂದು ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!