ಚೀನಾ ಏಕಪಕ್ಷೀಯವಾಗಿ ಎಲ್‌ಎಸಿ ಬದಲಾಯಿಸಲು ಪ್ರಯತ್ನಿಸಿದೆ: ಜೈಶಂಕರ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚೀನಾ ಏಕಪಕ್ಷೀಯವಾಗಿ ವಾಸ್ತವಿಕ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಚೀನಾ ವಿರುದ್ಧ ವಾಗ್ದಾಲಿ ನಡೆಸಿದರು. ದೈನಂದಿನ ಸುದ್ದಿ ನಿಯತಕಾಲಿಕೆಯೊಣದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜೈಶಂಕರ್, ಚೀನಾ ಏಕಪಕ್ಷೀಯವಾಗಿ LAC ಬದಲಾಯಿಸದಿರಲು ನಾವು ಒಪ್ಪಂದ ಮಾಡಿಕೊಂಡಿದ್ದೇವೆ. ಹಾಗಾಗಿ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ ಎಂದರು.

ನಮ್ಮ ಗಡಿ ಪ್ರದೇಶಗಳಲ್ಲಿ ಪಡೆಗಳನ್ನು ನಿಯೋಜಿಸದಂತೆ ನಾವು ಚೀನಾದೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದ್ದೇವೆ ಆದರೆ ಅವರು ಆ  ಒಪ್ಪಂದಗಳನ್ನು ಮೀರುತ್ತಿದ್ದಾರೆ ಅದಕ್ಕಾಗಿಯೇ ಪ್ರಸ್ತುತ ಉದ್ವಿಗ್ನ ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದೆ ಎಂದರು. ಇತ್ತೀಚೆಗೆ, ಭಾರತ ಮತ್ತು ಚೀನಾ 17 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಸಭೆಯನ್ನು ಡಿಸೆಂಬರ್ 20 ರಂದು ಚೀನಾದ ಭಾಗದಲ್ಲಿ ಚುಶುಲ್-ಮೊಲ್ಡೊ ಗಡಿ ಸಭೆಯ ಸ್ಥಳದಲ್ಲಿ ನಡೆಸಿತು ಮತ್ತು ಪಶ್ಚಿಮ ವಲಯದಲ್ಲಿ ನೆಲದ ಮೇಲೆ ಭದ್ರತೆ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಒಪ್ಪಿಕೊಂಡಿತು.

ಯಥಾಸ್ಥಿತಿಯನ್ನು ಬದಲಾಯಿಸಲು ಚೀನಾ ಪ್ರಯತ್ನಿಸುತ್ತಿರುವ ಬಗ್ಗೆ ಮಾತನಾಡಿದರು. ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಚೀನಾವನ್ನು ಹಿಂದಿಕ್ಕುವ ಸಾಧ್ಯತೆಯಿರುವ ಭಾರತ ಮತ್ತು ವಿಶ್ವ ರಾಜಕೀಯದಲ್ಲಿ ಅದರ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಜೈಶಂಕರ್, “ಈ ವರ್ಷದೊಳಗೆ ಭಾರತವು ಬಹುಶಃ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!