ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಈವರೆಗೂ 15 ಮಂದಿ ಮೃತಪಟ್ಟಿದ್ದಾರೆ.
ನೈಋತ್ಯ ಚೀನಾದಲ್ಲಿ ಭಾರೀ ಮಳೆಗೆ 15 ಮಂದಿ ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ.
ಸಿಚುವಾನ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ, 85 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ.
ಹಾನಿಯಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.