ಭಾರತದೊಂದಿಗಿನ ಸಂಬಂಧದ ಬಗ್ಗೆ ಚೀನಾ ಪ್ರಮುಖ ಹೇಳಿಕೆ: ಒಟ್ಟಾಗಿ ಕೆಲಸ ಮಾಡಲು ಸಿದ್ಧ ಎಂದ ಸಚಿವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ-ಚೀನಾ ಸಂಬಂಧವನ್ನು ಸುಧಾರಿಸಲು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ನೀಡಿದ್ದಾರೆ. ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ವೆಬ್‌ಸೈಟ್ ಮೂಲಕ ಬಹಿರಂಗಪಡಿಸಿದೆ. ಭಾನುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಅಲ್ಲಿನ ಪತ್ರಕರ್ತರು ಭಾರತದೊಂದಿಗಿನ ಸಂಬಂಧದ ಕುರಿತು ಪ್ರಶ್ನಿಸಿದ ವೇಳೆ ಈ ಉತ್ತರ ನೀಡಿದ್ದಾರೆ.

ಸುಸ್ಥಿರ ಅಭಿವೃದ್ಧಿ ಮತ್ತು ಉತ್ತಮ ಸಂಬಂಧಕ್ಕಾಗಿ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧ ಎಂದರು. ಭಾರತ-ಚೀನಾ ಸಂಬಂಧ ಈಗಾಗಲೇ ರಾಜತಾಂತ್ರಿಕ ಮಾರ್ಗಗಳು ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಮುಂದುವರಿಯುತ್ತಿವೆ. ಎರಡೂ ದೇಶಗಳು ಗಡಿಯಲ್ಲಿ ಸ್ಥಿರತೆಗೆ ಬದ್ಧವಾಗಿವೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸಲು ನಾವು ಭಾರತದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ವಾಂಗ್ ಯಿ ಹೇಳಿದರು.

ಇದೇ ತಿಂಗಳ 9ರಂದು ತವಾಂಗ್ ಪ್ರದೇಶದ ಗಡಿಯಲ್ಲಿ ಭಾರತ-ಚೀನಾ ಸೈನಿಕರು ಘರ್ಷಣೆ ನಡೆಸಿದ್ದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವಣ ಸಂಬಂಧದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿವೆ. ಇಂತಹ ಹೊತ್ತಿನಲ್ಲಿ ಚೀನಾ ವಿದೇಶಾಂಗ ಸಚಿವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!