ಹೊಸದಿಗಂತ ಆನ್ ಲೈನ್ ಡೆಸ್ಕ್:
2021ರ ಸಾಲಿನ ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಳ್ಳಲು ಚೀನಾ ಬೆಂಬಲ ವ್ಯಕ್ತಪಡಿಸಿದೆ.
ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ರಾಷ್ಟ್ರಗಳನ್ನೊಳಗೊಂಡ ಬ್ರಿಕ್ಸ್ ರಾಷ್ಟ್ರಗಳಲ್ಲಿ ಪ್ರಬಲ ರಾಷ್ಟ್ರವಾಗಿರುವ ಭಾರತ ಶೃಂಗಸಭೆಯನ್ನು ಆಯೋಜಿಸಲಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿರುವ ಸುಷ್ಮಾ ಸ್ವರಾಜ್ ಭವನದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜಯಶಂಕರ್ ಮತ್ತು ಬ್ರಿಕ್ಸ್ ಸಚಿವಾಲಯವು ಬ್ರಿಕ್ಸ್ 2021ರ ನೂತನ ವೆಬ್ ಸೈಟ್ ಬಿಡುಗಡೆಗೊಳಿಸಲಾಯಿತು.
ಈ ಬಗ್ಗೆ ಮಾತನಾಡಿದ ಚೀನಾ ವಿದೇಶಾಂಗ ವ್ಯವಹಾರಗಳ ವಕ್ತಾರ ವಾಂಗ್ ವೆನ್ ಬಿನ್, ಈ ಬಾರಿಯ ಬ್ರಿಕ್ಸ್ ಸಭೆಯನ್ನು ಭಾರತ ಆಯೋಜಿಸಲಿದ್ದು, ಅದಕ್ಕೆ ನಮ್ಮ ಬೆಂಬಲವಿದೆ. ಬ್ರಿಕ್ಸ್ ರಾಷ್ಟ್ರಗಳ ನಡುವೆ ಸೌಹಾರ್ದತೆ ಮತ್ತು ಸಹಕಾರಕ್ಕೆ ನಾವು ಬದ್ಧವಾಗಿರುತ್ತೇವೆ ಎಂದರು.
ಬ್ರಿಕ್ಸ್ ಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಭಾಗಿಯಾಗುವ ಸಾಧ್ಯತೆಗಳಿದ್ದು, ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.