Wednesday, July 6, 2022

Latest Posts

ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ -19 ಲಸಿಕೆ ನೀಡಲು ಮುಂದಾದ ಚೀನಾ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೋವಿಡ್ -19 ಲಸಿಕೆ ತುರ್ತು ಬಳಕೆಗೆ ಚೀನಾ ಅನುಮೋದನೆ ನೀಡಿದೆ ಎಂದು ಔಷಧ ತಯಾರಕ ಸಂಸ್ಥೆ ಸಿನೋವ್ಯಾಕ್ ಮಂಗಳವಾರ ದೃಢಪಡಿಸಿದೆ.
ಕೊರೋನಾ ಮೊದಲ ಬಾರಿಗೆ ಮಧ್ಯ ಚೀನಾದಲ್ಲಿ ಪತ್ತೆಯಾದ ಬಳಿಕ ಚೀನಾವು ಸೋಂಕು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ಜೊತೆಗೆ ಸುಮಾರು 77 ಕೋಟಿ ಜನರಿಗೆ ಲಸಿಕೆ ಹಾಕಿದೆ.
ಇದೀಗ ಮೂರು ವರ್ಷ ಮೇಲ್ಪಟ್ಟ ಮಕ್ಕಳಿಗೆ ತಮ್ಮ ಕಂಪನಿಯ ಲಸಿಕೆ ನೀಡಲು ಸರ್ಕಾರ ಅನುಮೋದನೆ ನೀಡಿದೆ ಎಂದು ಸಿನೋವ್ಯಾಕ್ ಸಂಸ್ಥೆಯ ವಕ್ತಾರರು ಎಎಫ್‌ಪಿಗೆ ತಿಳಿಸಿದ್ದಾರೆ.
ಸಿನೋವಾಕ್ ಲಸಿಕೆಯನ್ನು ಮೂರರಿಂದ 17 ವರ್ಷದ ಮಕ್ಕಳಿಗೆ ನೀಡಲು ತುರ್ತು ಬಳಕೆಗಾಗಿ ಅನುಮೋದಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಮಕ್ಕಳು ಮತ್ತು ಹದಿಹರೆಯದವರಲ್ಲಿ ಲಸಿಕೆಯ ಆರಂಭಿಕ ಹಂತದ ಪ್ರಯೋಗಗಳನ್ನು ಕಂಪನಿಯು ಪೂರ್ಣಗೊಳಿಸಿದೆ. ಶೀಘ್ರದಲ್ಲೇ, ಲ್ಯಾನ್ಸೆಟ್ ವೈಜ್ಞಾನಿಕ ಜರ್ನಲ್‌ನಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss