ಡಿಕೆಶಿ ನಿವಾಸದಲ್ಲಿ ಮತ್ತೆ ಮೂಲ ಪಕ್ಷಕ್ಕೆ ಹಿಂತಿರುಗಿದ ಚಿಂಚನಸೂರ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ತೊರೆದಿರುವ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರಿನ ನಿವಾಸದಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ.ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲಸ ಮಾಡುವ ಮೂಲಕ ಪಕ್ಷಕ್ಕೆ ಹೆಚ್ಚು ಸ್ಥಾನ ಪಡೆಯುವಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.
2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಚಿಂಚನಸೂರ್, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸೋಮವಾರವಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಮತ್ತೆ ಮೂಲ ಪಕ್ಷಕ್ಕೆ ಹಿಂತಿರುಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!