ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಜವಳಿ ಉದ್ಯಮಿ ಪಾಲ್ ಪು ಅವರು ರಾಜ್ಯದಲ್ಲಿ ನೂರು ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಕರ್ನಾಟಕ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಪಾಲ್ ಪು ಅವರು ಸೆಪ್ಟೆಂಬರ್‌ವರೆಗೆ ಕರ್ನಾಟಕದಲ್ಲೇ ಇದ್ದು, ಯೋಜನಾ ಸ್ಥಳ ಫೈನಲ್ ಮಾಡುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದಲ್ಲಿ ತಕ್ಷಣಕ್ಕೆ ಅಗತ್ಯ ಮೂಲಸೌಕರ್ಯ ಇರುವ ಭೂಮಿ ಲಭ್ಯವಿದೆ. ವರ್ಷದಲ್ಲಿ 365 ದಿನ ನೀರು, ಸಮರ್ಪಕ ವಿದ್ಯುತ್, ರಾಷ್ಟ್ರೀಯ ಹೆದ್ದಾರಿ, ವಿಮಾನಯಾನ ಸೌಲಭ್ಯ ಇರುವ ಕಡೆ ಅಗತ್ಯ ಪ್ರಮಾಣದ ಭೂಮಿ ಒದಗಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ್ ಎಂದಿದ್ದಾರೆ.