ವಾಪಸ್‌ ಬನ್ನಿ: ಭಾರತೀಯ ವಿದ್ಯಾರ್ಥಿಗಳಿಗೆ ಚೀನಾ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚೀನಾದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಡ್ರ್ಯಾಗನ್ ಕಂಟ್ರಿ ಶುಭ ಸುದ್ದಿ ನೀಡಿದೆ. ಕೋವಿಡ್‌ನಿಂದಾಗಿ ಭಾರತದಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಚೀನಾಕ್ಕೆ ವಾಪಸಾಗಲು ವಿದೇಶಾಂಗ ಇಲಾಖೆ ಅನುಮತಿ ನೀಡಿದೆ.

ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ವಿದ್ಯಾರ್ಥಿಗಳ ವಾಪಸಾತಿಗೆ ಅನುಮತಿಸಿದ್ದಾರೆ. ಸದ್ಯಕ್ಕೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದಿರುವ ಚೀನಾ, ಕರೋನಾದಿಂದಾಗಿ ಕಳೆದ ಎರಡು ವರ್ಷಗಳಿಂದ ಚೀನಾ ಕೆಲವು ನಿರ್ಬಂಧಗಳನ್ನು ವಿಧಿಸಿದ್ದರು. ಹಾಗಾಗಿ ಅಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿಗಳು ಹಿಂದಿರುಗಲು ಸಾಧ್ಯವಾಗಿರಲಿಲ್ಲ.

ಚೀನಾದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ. ಈಗಾಗಲೇ ಪ್ರಕ್ರಿಯೆ ಆರಂಭವಾಗಿದ್ದು, ಸುಮಾರು 23,000 ಭಾರತೀಯ ವಿದ್ಯಾರ್ಥಿಗಳು ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ.

2019 ರಲ್ಲಿ ಕೊರೊನಾ ಕಾರಣದಿಂದಾಗಿ ವಿಧಿಸಿದ ನಿರ್ಬಂಧಗಳ ಸಲುವಾಗಿ ಭಾರತಕ್ಕೆ ವಾಪಸಾಗಿದ್ದ ವಿದ್ಯಾರ್ಥಿಗಳು ಇದುವರೆಗೂ ಚೀನಾಗೆ ಮರಳಿಲ್ಲ. ಇದೀಗ ಷರತ್ತುಗಳನ್ನು ವಿಧಿಸಿ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!