Thursday, December 8, 2022

Latest Posts

ಗೃಹಬಂಧನ ವಂದತಿ ಬೆನ್ನಲ್ಲೇ ಚೀನಾ ಅಧ್ಯಕ್ಷ ಜಿನ್​ಪಿಂಗ್ ಪ್ರತ್ಯಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಚೀನಾದ ಅಧ್ಯಕ್ಷ ಪದಚ್ಯುತಿ, ಗೃಹಬಂಧನದಲ್ಲಿದ್ದಾರೆ ಎಂಬ ವದಂತಿಗಳ ಮಧ್ಯೆಯೇ ಅಧ್ಯಕ್ಷ ಕ್ಸಿ ಜಿನ್​ಪಿಂಗ್​ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಸೆಪ್ಟೆಂಬರ್​ 16 ರಂದು ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಇರುವುದು ವಿವಿಧ ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿತ್ತು.

ಚೀನಾದಲ್ಲಿ ಭ್ರಷ್ಟಾಚಾರವನ್ನು ಹತ್ತಿಕ್ಕಲು ಕ್ಸಿ ಜಿನ್​ಪಿಂಗ್​ ವಿರೋಧಿ ರಾಜಕಾರಣಿಗಳು ಮತ್ತು ಮಂತ್ರಿಗಳಿಗೆ ಗಲ್ಲು ಶಿಕ್ಷ ವಿಧಿಸಿದ್ದರು. ಇದಾದ ಬಳಿಕ ಜಿನ್​ಪಿಂಗ್​ರನ್ನು ಗೃಹಬಂಧನಕ್ಕೆ ಒಳಪಡಿಸಲಾಗಿದೆ ಎಂದು ಸುದ್ದಿ ಹರಿದಾಡಿತ್ತು.

ಇದಲ್ಲದೇ, ಜಿನ್‌ಪಿಂಗ್ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅಥವಾ ಪಿಎಲ್‌ಎ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ದಿಢೀರ್​ ಆಗಿ ಜಿನ್​ಪಿಂಗ್​ ಟಿವಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅದೆಲ್ಲಾ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!