ಚೀನಾದ ರೆಸ್ಟೋರೆಂಟ್‌ನಲ್ಲಿ ಬೆಂಕಿ: 17 ಮಂದಿ ಸಜೀವ ದಹನ

ಹೊದಿಗಂತ ಡಿಜಿಟಲ್ ಡೆಸ್ಕ್:

ಈಶಾನ್ಯ ಚೀನಾದ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಂದಿ ಸಜೀವ ದಹನವಾಗಿದ್ದಾರೆ. ಚಾಂಗ್‌ಚುನ್ ನಗರದ ರೆಸ್ಟೋರೆಂಟ್ ಹೊತ್ತಿ ಉರಿದಿದ್ದು, ದಟ್ಟ ಹೊಗೆ ಆವರಿಸಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಹೊತ್ತಿದ್ದು ಏಕೆ ಎನ್ನುವ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಕಿ ಹೊತ್ತಿದ ವಿಯ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡಗಳ ಸ್ಥಳಕ್ಕೆ ಧಾವಿಸಿದ್ದು, ಮೂರು ಗಂಟೆಗಳಲ್ಲಿ ಕಾರ್ಯಾಚರಣೆ ಮುಗಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!