ಕಾಲ್ತುಳಿತದಲ್ಲಿ ಮೃತಪಟ್ಟ ಚಿನ್ಮಯಿ ಶೆಟ್ಟಿ ಕ್ರಿಕೆಟ್‌ ಪ್ರೇಮಿಯೇ ಅಲ್ಲ! ಫ್ರೆಂಡ್ಸ್‌ಗೋಸ್ಕರ ಹೋಗಿದ್ರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಯಕ್ಷ ಕಲಾವಿದೆ ಆಗಿರೋ ಬಹುಮುಖಿ ಪ್ರತಿಭೆ ಚಿನ್ಮಯಿ ಶೆಟ್ಟಿ ಜೀವಬಿಟ್ಟಿದ್ದಾಳೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ಏಕಾಏಕಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಇದೇ ಕಾಲ್ತುಳಿತದಲ್ಲಿ ಕನಕಪುರ ರೋಡ್ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನಿಧನರಾಗಿದ್ದಾರೆ. ಮೃತ ಚಿನ್ಮಯಿ ಶೆಟ್ಟಿ ಕ್ರಿಕೆಟ್ ಪ್ರೇಮಿ ಅಲ್ಲದೇ ಇದ್ದರು ಫ್ರೆಂಡ್ಸ್ ಜೊತೆ ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನೂ, ತಮಗಿದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ದುಃಖ ಹೇಳತೀರದು. ಹೌದು, ಮೃತ ಚಿನ್ಮಯಿ ಶೆಟ್ಟಿ ಉಡುಪಿ ಜಿಲ್ಲೆಯ ಹೆಬ್ರಿ ಮೂಲದ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿಯವರ ಪುತ್ರಿಯಾಗಿದ್ದರು. ಇವರು ಬ್ಯಾಸ್ಕೆಟ್ ಬಾಲ್ ಪ್ಲೇಯರ್ ಕೂಡ ಆಗಿದ್ದರು. ‘ಯಕ್ಷತರಂಗ ಬೆಂಗಳೂರು’ ರಲ್ಲಿ ಯಕ್ಷಗಾನ ಕಲಿಯುತ್ತಿದ್ದರು. ಮುದ್ದಾದ ಮಗಳ ಮೇಲೆ ಪೋಷಕರು ಬೆಟ್ಟದಷ್ಟು ಕನಸು ಕಟ್ಟಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!