ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಪದಾಧಿಕಾರಿಗಳಿಗೆ ಸಿಕ್ಕಿತು ಮಧ್ಯಂತರ ರಕ್ಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆರ್​ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕೆಎಸ್​ ಸಿಎ, ಆರ್​ ಸಿಬಿ, ಡಿಎನ್ ಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂಬ ಹೈಕೋರ್ಟ್ ಆದೇಶ ವಿಸ್ತರಣೆ ಮಾಡಿದೆ.

ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದು ಕೋರಿ ಆರ್​ ಸಿಬಿ, ಕೆಎಸ್​ ಸಿಎ, ಡಿಎನ್​ ಎ ಅರ್ಜಿ ಸಲ್ಲಿಸಿದ್ದು, ಆಗಸ್ಟ್ 5ರ ವರೆಗೆ ಆರೋಪಪಟ್ಟಿ ಸಲ್ಲಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಬಲವಂತದ ಕ್ರಮ ಕೈಗೊಳ್ಳದಂತೆ ನೀಡಿದ್ದ ಆದೇಶ ವಿಸ್ತರಣೆಯಾಗಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಲಾಗಿದೆ.

ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರಿನ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ(ಕೆಎಸ್ಸಿಎ), ರಾಯಲ್ ಚಾಲಂಜರ್ಸ್ ಬೆಂಗಳೂರು ಫ್ರಾಂಚೈಸಿ(ಆರ್ಸಿಬಿ) ಹಾಗೂ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ ಪದಾಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಅಲ್ಲದೇ ಕೆಲವರು ಬಂಧಿಸಲಾಗಿತ್ತು.

ಈ ಪ್ರಕರಣ ರದ್ದುಕೋರಿ ಕೆಎಸ್​​ಸಿಎ, ಆರ್​​ ಸಿಬಿ ಹಾಗೂ ಡಿಎನ್ ಎ ಪದಾಧಿಕಾರಿಗಳು ಸಲ್ಲಿಸಿದ್ದರು . ಇದೀಗ ಆಗಸ್ಟ್ 5ರ ವರೆಗೆ ಚಾರ್ಜ್​ ಶೀಟ್ ಸಲ್ಲಿಸದಂತೆ ಕೋರ್ಟ್ ಮಹತ್ವ ಸೂಚನೆ ನೀಡಿದೆ. ಹಾಗೇ ಬಲವಂತದ ಕ್ರಮ ಬೇಡ ಎನ್ನುವ ಹೈಕೋರ್ಟ್ ನ ಆದೇಶ ವಿಸ್ತರಣೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!