ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೂನ್ 4 ರಂದು ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ವಿಜಯೋತ್ಸವ ಆಚರಣೆ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕ್ರಿಕೆಟ್ ತಂಡವು ಪ್ರಾಥಮಿಕವಾಗಿ ಕಾರಣವಾಗಿದೆ ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಆಭಿಪ್ರಾಯ ಪಟ್ಟಿದೆ.

ಇದೇ ವೇಳೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಮಂಗಳವಾರ ರದ್ದುಪಡಿಸಿ ಆದೇಶಿಸಿದೆ.

ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದ್ದು,ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ.

ಆರ್​ಸಿಬಿ ಐಪಿಎಲ್ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಹಾಗೂ ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು.

ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿರುವುದರಿಂದ, ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಇತರರ ಅಮಾನತು ಆದೇಶ ಏನಾಗಲಿದೆ ಎಂಬ ಕುತೂಹಲ ಮೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!