ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ.. CAT ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಸಿಎಟಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಕೇಂದ್ರೀಯ ಆಡಳಿತ ನ್ಯಾಯಮಂಡಳಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಾಸಕ ಬಿ.ಆರ್.ಪಾಟೀಲ್ ಅವರ ಸಿದ್ದರಾಮಯ್ಯನವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್‌ರವರು ಈ ರೀತಿ ಹೇಳಿಕೆ ನೀಡಿರಬಹುದು ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!