ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.
RCB ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರಕ್ಕೆ ಮಾಹಿತಿ ನೀಡಿತ್ತು. ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ.
ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಕೇಂದ್ರ ವರದಿಯನ್ನು ಅಂಗೀಕರಿಸಿದ್ದು ಮುಂದಿನ ನಡೆ ಏನು ಎಂಬುದು ಕಾದುನೋಡಬೇಕಿದೆ.