ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನ ಸಮಾರಂಭದಲ್ಲಿ ಮೆಗಾಸ್ಟಾರ್ ಚಿರಂಜೀವಿ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಭಾಗವಹಿಸಿದ್ದರು.
ವಿಜಯವಾಡದ ಗನ್ನವರಂ ಮಂಡಲ, ಕೇಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಸಮಾರಂಭದಲ್ಲಿ ಚಿರಂಜೀವಿ ಮತ್ತು ರಜನಿಕಾಂತ್ ಕಾಣಿಸಿಕೊಂಡರು.
ಈವೆಂಟ್‌ಗಾಗಿ ಇಬ್ಬರೂ ಒಂದೇ ಬಣ್ಣದ ಬಟ್ಟೆಯನ್ನು ಧರಿಸಿದ್ದು ವಿಶೇಷ. ಚಂದ್ರಬಾಬು ನಾಯ್ಡು ಅವರಿಗೆ ಚಿರಂಜೀವಿ ಮತ್ತು ರಜನಿಕಾಂತ್ ಹಾಗೂ ನಟ-ರಾಜಕಾರಣಿ ನಂದಮೂರಿ ಬಾಲಕೃಷ್ಣ ಅಭಿನಂದಿಸಿದ್ದಾರೆ.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ನಿತಿನ್ ಗಡ್ಕರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.