ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ ಇತ್ತೀಚೆಗಷ್ಟೇ ಪತ್ನಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಆ ಫೋಟೋಗಳನ್ನು ಚಿರಂಜೀವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಸಲಿ ಸುದ್ದಿ ಈಗ ಹೊರ ಬಿದ್ದಿದೆ.
ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ ಎಂದು ಹೇಳಲಾಗುತ್ತಿದೆ. ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆಯಲಾಗಿತ್ತು. ಸಣ್ಣದೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಚಿರಂಜೀವಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರಂತೆ.
ಚಿರಂಜೀವಿ ಆಪ್ತರು ಈ ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಅದು ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆತಂಕ ಪಡುವಂತಹ ಅಗತ್ಯವಿಲ್ಲ ಎಂದು ಚಿರಂಜೀವಿ ಆಪ್ತರು ತಿಳಿಸಿದ್ದಾರೆ.