ಕ್ರಿಸ್ ಹಿಪ್ಕಿನ್ಸ್ ಪ್ರಮಾಣ ವಚನ:ನ್ಯೂಜಿಲೆಂಡ್‌ನ 41ನೇ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ನ್ಯೂಜಿಲೆಂಡ್‌ನ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ದೇಶದ 41ನೇ ಪ್ರಧಾನಿಯಾಗಿ ಕ್ರಿಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಲೇಬರ್ ಪಕ್ಷದ ಪರವಾಗಿ ಕ್ರಿಸ್ ಮಾತ್ರ ಪ್ರಧಾನಿ ಹುದ್ದೆಗೆ ಅಭ್ಯರ್ಥಿಯಾಗಿದ್ದರು. ಕ್ರಿಸ್,  ಈ ಹಿಂದೆ ಕೋವಿಡ್ -19 ನಿಯಂತ್ರಣ ಘಟಕದ ಮೇಲ್ವಿಚಾರಣೆಯಲ್ಲಿ ಪೊಲೀಸ್ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನ್ಯೂಜಿಲೆಂಡ್‌ನ ಪ್ರಧಾನಿಯಾಗಿದ್ದ ಜಸಿಂಡಾ ಅರ್ಡೆರ್ನ್ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ವರ್ಷದ ಅಕ್ಟೋಬರ್‌ನಲ್ಲಿ ಅವರ ಅಧಿಕಾರಾವಧಿ ಕೊನೆಗೊಳ್ಳಲಿದೆ. ತನ್ನ ಸ್ಥಾನಕ್ಕೆ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಬಹಿರಂಗಪಡಿಸಿದರು.

ಲೇಬರ್ ಪಕ್ಷವು ಹೊಸ ಪ್ರಧಾನಿ ಅಭ್ಯರ್ಥಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಿತು. ದೇಶವನ್ನು ಆರ್ಥಿಕವಾಗಿ ಸದೃಢವಾಗಿಡಲು ಪ್ರಯತ್ನಿಸುವುದಾಗಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕ್ರಿಸ್ ಹೇಳಿದರು.

ಮುಖ್ಯವಾಗಿ ಹಣದುಬ್ಬರ ಮತ್ತು ಹೆಚ್ಚುತ್ತಿರುವ ಮನೆ ಬೆಲೆಗಳು ಹಾಗೂ ಶಾಂತಿ ಮತ್ತು ಭದ್ರತೆಯ ವಿಷಯಗಳ ಮೇಲೆ ಕೇಂದ್ರೀಕರಿಸುವುದಾಗಿ ತಿಳಿಸಿದರು. ಕ್ರಿಸ್ ಅವರ ಅಧಿಕಾರಾವಧಿಯು ಈ ಅಕ್ಟೋಬರ್‌ಗೆ ಕೊನೆಗೊಳ್ಳುತ್ತದೆ. ಅಕ್ಟೋಬರ್ 14 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇದರೊಂದಿಗೆ ಹೊಸ ಸರ್ಕಾರ ಮತ್ತೊಮ್ಮೆ ರಚನೆಯಾಗಲಿದೆ.  ಕ್ರಿಸ್ ಮೊದಲ ಬಾರಿಗೆ 2008 ರಲ್ಲಿ ಸಂಸತ್ತಿಗೆ ಆಯ್ಕೆಯಾಗಿ ಅಂದಿನಿಂದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಎರಡು ವರ್ಷಗಳ ಹಿಂದೆ ದೇಶವು ಕೋವಿಡ್ ಸಮಸ್ಯೆಯನ್ನು ಎದುರಿಸಿದಾಗ, ಸಮಸ್ಯೆಯನ್ನು ನಿಭಾಯಿಸುವಲ್ಲಿ ಕ್ರಿಸ್ ಅವರ ಕಾರ್ಯವು ಎಲ್ಲರ ಗಮನ ಸೆಳೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!