spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿತ್ರದುರ್ಗ| ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಚಿತ್ರದುರ್ಗ:

ಜಿಲ್ಲೆಯಲ್ಲಿ ಕೋವಿಡ್ ವೈರಸ್‌ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ ೦೨ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೩೬,೪೬೬ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ೦೨, ಚಳ್ಳಕೆರೆ ೦೦, ಹಿರಿಯೂರು ೦೦, ಹೊಳಲ್ಕೆರೆ ೦೦, ಹೊಸದುರ್ಗ ೦೦ ಹಾಗೂ ಮೊಳಕಾಲ್ಮುರು ೦೦ ಸೇರಿದಂತೆ ಒಟ್ಟು ೦೨ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಬುಧವಾರ ಒಟ್ಟು ೨೪೩೪ ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಕೋವಿಡ್‌ನಿಂದ ಇದುವರೆಗೆ ಒಟ್ಟು ೨೦೩ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೩೬,೧೦೧ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೧೬೨ ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೪,೯೭,೧೭೦ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೭,೭೬,೨೭೪ ಜನರ ಮಾದರಿ ಸಂಗ್ರಹಿಸಲಾಗಿದ್ದು, ೭,೩೬,೦೪೫ ಜನರ ವರದಿ ನೆಗೆಟೀವ್ ಬಂದಿದೆ. ಉಳಿದ ೨೮೯೭ ಜನರ ವರದಿ ಬರುವುದು ಬಾಕಿ ಇದೆ. ೮೬೬ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss