January17, 2026
Saturday, January 17, 2026
spot_img

ಚಿತ್ರದುರ್ಗ ಬಸ್ ಅಪಘಾತ: ಐದು ಮೃತದೇಹಗಳ ಗುರುತು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವೆಲ್ಸ್‌ನ ಸ್ಲೀಪರ್ ಬಸ್‌ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಈ ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತರ ಗುರುತು ದೃಢೀಕರಣಕ್ಕೆ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ. ಕೆಲವರ ಕುಟುಂಬಸ್ಥರು ಇನ್ನೂ ಸಂಪರ್ಕಕ್ಕೆ ಸಿಗದೇ ಆತಂಕದಲ್ಲಿದ್ದಾರೆ. ಮಾವಳ್ಳಿ ತಂಡದಲ್ಲಿ ಬಿಂದು ಮತ್ತು ಅವರ ಐದು ವರ್ಷದ ಮಗುವಿನ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಇದುವರೆಗೆ 5 ಮಂದಿ ಮೃತರ ಗುರುತು ಪತ್ತೆಹಚ್ಚಲಾಗಿದೆ.

Must Read

error: Content is protected !!