ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಪ್ರಕರಣ ಸಂಬಂಧ ಆಡಳಿತ ವೈಫಲ್ಯ ಮತ್ತು ಸಾರ್ವಜನಿಕರಿಂದ ದೂರು ಹಿನ್ನೆಲೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ನನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಹೆರಿಗೆ ವಾರ್ಡ್, ಎಕ್ಸ್ ರೇ ಸೇರಿ ಹಲವೆಡೆ ಲಂಚಕ್ಕೆ ಬೇಡಿಕೆ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದಾರೆ.ಬಳಿಕ ಡಿಸಿ ದಿವ್ಯಪ್ರಭುರಿಂದ ಮಾಹಿತಿ ಪಡೆದ ಸಚಿವ ದಿನೇಶ್ ಗುಂಡೂರಾವ್, ಹಲವು ದೂರುಗಳು, ಆಡಳಿತ ವೈಫಲ್ಯ ಕಂಡು ಬಂದಿದ್ದರಿಂದ ಸರ್ಜನ್ ಡಾ. ಬಸವರಾಜ ಅಮಾನತಿಗೆ ಸೂಚಿಸಿದ್ದಾರೆ.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ 5 ಜನ ತೀರಿ ಹೋಗಿದ್ದಾರೆ. ನೀರಿನ ಕಲುಷಿತದಿಂದ ತೀರಿ ಹೋಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ಮಾಡಲು ಹೇಳಿದ್ದೇವೆ. ಜಿಲ್ಲಾಸ್ಪತ್ರೆಗೂ ಕೂಡ ಭೇಟಿ ಕೊಟ್ಟಿದ್ದೆ. ಅಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿತ್ತು. ಹಾಗಾಗಿ ಅಲ್ಲಿನ ಸರ್ಜನ್ನ್ನು ಅಮಾನತು ಮಾಡಲು ಹೇಳಿದ್ದೇನೆ ಎಂದರು.
ಪ್ರಕರಣಕ್ಕೆ ಸಂಬ0ಧಿಸಿದ0ತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೃತರ ಕುಟುಂಬಗಳಿಗೆ ಸರ್ಕಾರ ವತಿಯಿಂದ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.