Wednesday, August 17, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 212 ಜನರಿಗೆ ಕೋವಿಡ್ ಸೋಂಕು ದೃಢ :128 ಮಂದಿ ಬಿಡುಗಡೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ, ಚಿತ್ರದುರ್ಗ:

ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್‌ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ೨೧೨ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೧೮,೭೧೮ ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೯೯, ಚಳ್ಳಕೆರೆ ೧೯, ಹಿರಿಯೂರು ೪೪, ಹೊಳಲ್ಕೆರೆ ೧೯, ಹೊಸದುರ್ಗ ೨೩, ಮೊಳಕಾಲ್ಮುರು ತಾಲ್ಲೂಕಿನಲ್ಲಿ ೮ ಪ್ರಕರಣ ಸೇರಿದಂತೆ ಒಟ್ಟು ೨೧೨ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋವಾರ ೧೨೮ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು ೧೨೯೯ ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಕೋವಿಡ್‌ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು ೯೧ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧೬,೯೦೧ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೧,೭೨೬ ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೧,೫೦,೯೯೪ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೪,೩೭,೯೧೯ ಜನರ ಮಾದರಿ ಸಂಗ್ರಹಿಸಲಾಗಿದ್ದು, ೪,೧೭,೨೪೮ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೯೨೭ ಜನರ ವರದಿ ಬರುವುದು ಬಾಕಿ ಇದೆ. ೭೨೬ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!