spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 32 ಜನರಿಗೆ ಕೋವಿಡ್ ಸೋಂಕು ದೃಢ: 10 ಮಂದಿ ಬಿಡುಗಡೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ವರದಿ, ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್‌ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ ೩೨ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೩೫,೮೦೮ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೧೨, ಚಳ್ಳಕೆರೆ ೦೭, ಹಿರಿಯೂರು ೦೭, ಹೊಳಲ್ಕೆರೆ ೦೨, ಹೊಸದುರ್ಗ ೦೪, ಮೊಳಕಾಲ್ಮುರು ೦೦ ಪ್ರಕರಣಗಳು ಸೇರಿದಂತೆ ಒಟ್ಟು ೩೨ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ ೧೦ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು ೧೨೪೫ ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಕೋವಿಡ್‌ನಿಂದ ಇದುವರೆಗೆ ಒಟ್ಟು ೧೮೬ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ ೩೫,೧೦೨ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೫೨೦ ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೪,೯೩,೦೨೮ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೬,೬೦,೩೬೯ ಜನರ ಮಾದರಿ ಸಂಗ್ರಹಿಸಲಾಗಿದ್ದು, ೬,೨೩,೨೮೧ ಜನರ ವರದಿ ನೆಗೆಟೀವ್ ಬಂದಿದೆ. ಉಳಿದ ೪೧೪ ಜನರ ವರದಿ ಬರುವುದು ಬಾಕಿ ಇದೆ. ೮೬೬ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss