Tuesday, June 28, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 95 ಜನರಿಗೆ ಕೋವಿಡ್ ಸೋಂಕು ದೃಢ: 23 ಮಂದಿ ಬಿಡುಗಡೆ

ಹೊಸದಿಗಂತ ವರದಿ, ಚಿತ್ರದುರ್ಗ:

ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್‌ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ ೯೫ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೧೫,೯೨೩ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೩೯, ಚಳ್ಳಕೆರೆ ೧೦, ಹಿರಿಯೂರು ೧೭, ಹೊಳಲ್ಕೆರೆ ೬, ಹೊಸದುರ್ಗ ೧೧, ಮೊಳಕಾಲ್ಮುರು ತಾಲ್ಲೂಕಿನಲ್ಲಿ ೦೩ ಹಾಗೂ ಹೊರ ಜಿಲ್ಲೆಯ ೯ ಪ್ರಕರಣಗಳು ಸೇರಿದಂತೆ ಒಟ್ಟು ೯೫ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ ೨೩ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು ೧೬೭೨ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದುವರೆಗೂ ಒಟ್ಟು ೭೦ ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೧೫,೪೩೩ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೪೨೦ ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೧,೨೭,೮೦೩ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೩,೯೦,೯೧೭ ಜನರ ಮಾದರಿ ಸಂಗ್ರಹಿಸಲಾಗಿದ್ದು, ೩,೭೩,೪೯೯ ಜನರ ವರದಿ ನೆಗೆಟೀವ್ ಬಂದಿದೆ, ಉಳಿದ ೭೯೦ ಜನರ ವರದಿ ಬರುವುದು ಬಾಕಿ ಇದೆ. ೭೦೫ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss