ಹೊಸದಿಗಂತ ವರದಿ, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಹೈಕೋರ್ಟ್ ರಿಜಿಸ್ಟಾರ್ ಜನರಲ್ ಕೆ.ಎಸ್. ಭರತ್‌ಕುಮಾರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಬಿ.ಎಸ್.ರೇಖಾ ಅವರನ್ನು ಯಾದಗಿರಿ ಜಿಲ್ಲಾ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ.ಗೀತಾ ಅವರನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಾಗಿ ನಿಯೋಜನೆ ಮಾಡಲಾಗಿದೆ.
ಮುರುಘಾ ಮಠದ ಪ್ರಕರಣದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಿಲ್ಲಾ ನ್ಯಾಯಾಧೀಶರನ್ನೇ ಮುರುಘಾಮಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿ.ಎಸ್.ರೇಖಾ ಅವರು ಮುರುಘಾಮಠದ ಆಡಳಿತದ ಹೊಣೆ ವಹಿಸಿಕೊಂಡಿದ್ದರು.