ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ

ಹೊಸದಿಗಂತ ಚಿತ್ರದುರ್ಗ:

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ.

ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ – 20.51%, ಹೊಸದುರ್ಗ-17.89%, ಮೊಳಕಾಲ್ಮೂರು- 26.77%,ಪಾವಗಡ- 20.51%,ಶಿರಾ-19.90% ಮತದಾನವಾಗಿದ್ದು, ಮತದಾರರಿಂದ ಉತ್ತಮ ಸ್ಪಂದನೆ ದೊರಕಿದೆ.

ಬಿರು ಬಿಸಿಲಿನ ನಡುವೆಯೂ ಮತ್ತು ಮತಾದದರು ಮತಗಟ್ಟೆಗಳಿಗೆ ಆಗಮಿಸಿ ಸಂತಸದಿಂದ ಮತಚಲಾಯಿಸುತ್ತಿದ್ದಾರೆ. ಈ ಬಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿದ್ದು ನೆರಳು, ಕುಡಿಯುವ ನೀರು ಆದ್ಯತೆ ವಹಿಸಿದೆ. ವಿಕಲಚೇತನರು ಹಾಗೂ ಹಿರಿಯರು ನಾಗರಿಕರ ಅನುಕೂಲಕ್ಕಾಗಿ ಗಾಲಿ ಕುರ್ಚಿಗಳು ಹಾಗೂ ರ್ಯಾಂಪ್‌ಗಳ ಮತಗಟ್ಟೆಯಲ್ಲಿ ಸೌಲಭ್ಯ ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!