ಚಿತ್ರದುರ್ಗ ಬಂಡಾಯ ಶಮನ: ಶಾಸಕ ಚಂದ್ರಪ್ಪ ಮನವೊಲಿಸುವಲ್ಲಿ ಬಿಜೆಪಿ ಯಶಸ್ವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಸಕಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ತನ್ನ ಪುತ್ರ ರಘುಚಂದ್ರನ್​ನನ್ನು (Raghuchandran) ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಹೊರಟಿದ್ದ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ (M. Chandrappa)ಅವರ ಬಂಡಾಯ ಶಮನಗೊಂಡಿದೆ.

ಬಿಎಸ್ ಯಡಿಯೂರಪ್ಪ (B.S.Yediyurappa) ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y. Vijayendra) ಅವರು ಚಂದ್ರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು ನಗರದ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಎಂ ಚಂದ್ರಪ್ಪ ಅವರು ಇಂದು ಭೇಟಿ ನೀಡಿದ್ದಾರೆ. ಈ ವೇಳೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ಚಂದ್ರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮನವೊಲಿಸಿದ್ದಾರೆ. ಅದರಂತೆ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪುತ್ರ ರಘುಚಂದನ್ ಒಪ್ಪಿಗೆ ಸೂಚಿಸಿದ್ದಾರೆ. ಆ ಮೂಲಕ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಸೋಲಿನ ಭೀತಿ ಎದುರಿಸುತ್ತಿದ್ದ ಗೋವಿಂದ ಕಾರಜೋಳ ಅವರು ನಿಟ್ಟುಸಿರು ಬಿಟ್ಟಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!